ಬಾಗಲಕೋಟೆ: ಸಿಲಿಂಡರ್ ಸ್ಫೋಟದಿಂದ ಬಡಂಗ್ ಫ್ಯಾಕ್ಟರಿ ಧ್ವಂಸವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಗರದ ಕಂಟಿ ಬಸವೇಶ್ವರ ಹತ್ತಿರ ನಡೆದಿದೆ. ಸಿಲಿಂಡರ್ ಸ್ಫೋಟದಿಂದ ಮಧ್ಯರಾತ್ರಿ 1 ಗಂಟೆಗೆ ಗೋಕಾಕ್ ಬಡಂಗ ಫ್ಯಾಕ್ಟರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಆರಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟರು.
ಗೋಕಾಕ್ ಬಡಂಗ್ ಫ್ಯಾಕ್ಟರಿ ಮಹಮ್ಮದ್ ಹುಸೇನ್ ಸಾಬ್ ಗೋಕಾಕ್ ರವರಿಗೆ ಸೇರಿದ್ದು ಎನ್ನಲಾಗಿದೆ. ಸಿಲಿಂಡರ್ ಸ್ಫೋಟದ ಅಗ್ನಿ ಅವಘಡಕ್ಕೆ ಸುಮಾರು 50 ಲಕ್ಷ ಬೆಲೆಬಾಳುವ ವಸ್ತುಗಳು ಹಾನಿಗೀಡಾಗಿವೆ. ಗೋಕಾಕ್ ಬಡಂಗ ಫ್ಯಾಕ್ಟರಿಯಲ್ಲಿ ಕಾರ್ಮಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸಿಲಿಂಡರ್ ಸ್ಫೋಟ ಅಗ್ನಿ ಅವಘಡ ಕುರಿತು ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಅಗ್ನಿ ದುರಂತಕ್ಕೆ ಮತ್ತೇನು ಕಾರಣ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


