ಕೊಪ್ಪಳ: ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಸಮೀಪ ಇರುವ ಸ್ಟೀಲ್ ಫ್ಯಾಕ್ಟರಿಯಲ್ಲಿ ದುರ್ಘಟನೆ ನಡೆದಿದೆ. ರಾಘವೇಂದ್ರ ಗೊಂದಳಿ(40) ಮೃತಪಟ್ಟವರಾಗಿದ್ದಾರೆ.
ಅವರು ಕೊಪ್ಪಳ ತಾಲೂಕಿನ ಹಿಟ್ನಾಳ ನಿವಾಸಿಯಾಗಿದ್ದು, ಮೇ 28 ರಂದು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ BFG ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದರು. ಅವರನ್ನು ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


