ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ.
ಜರ್ಮನಿಯ ಮ್ಯೂನಿಕ್‍ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲು ಲುಫ್ತಾನ್ಸಾ ಏರ್ ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ಹೆಸರಿನಲ್ಲೇ ಟಿಕೆಟ್ ಬುಕ್ ಮಾಡಲಾಗಿದೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಮ್ಯೂನಿಕ್ ನಿಂದ ಹೊರಡಲಿರುವ ವಿಮಾನ, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದೆ. ಇದೇ ವಿಮಾನದಲ್ಲಿ ಪ್ರಜ್ವಲ್ ಆಗಮಿಸಲಿದ್ದಾರೆ ಎಂದು ತನಿಖಾಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಕಾದು ಕುಳಿತಿದ್ದಾರೆ.
ಎಸ್‍ಐಟಿಯ ಒಂದು ತಂಡ ವಿಮಾನ ನಿಲ್ದಾಣದಲ್ಲಿದೆ. ನ್ಯಾಯಾಲಯದಿಂದ ಬಂಧನ ವಾರಂಟ್ ಜಾರಿ ಆಗಿದ್ದು, ಪ್ರಜ್ವಲ್ ಬಂದ ತಕ್ಷಣವೇ ವಶಕ್ಕೆ ಪಡೆದು ಬಂಧಿಸಲಾಗುವುದು ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


