ನವದೆಹಲಿ: ಜಾತಿ ಮತ್ತು ಧರ್ಮದ ಆಧಾರದಲ್ಲಿ ಮತಯಾಚಿಸಬಾರದು ಎಂಬ ಚುನಾವಣಾ ಆಯೋಗದ ನಿರ್ದೇಶನದ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಚುನಾವಣಾ ಪ್ರಚಾರದ ವೇಳೆ ‘ಮಂದಿರ-ಮಸೀದಿ’ ಹಾಗೂ ದೇಶ ವಿಭಜನೆ ವಿಷಯದ ಕುರಿತು 421 ಬಾರಿ ಮಾತನಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಏಳನೇ ಮತ್ತು ಕೊನೆಯ ಹಂತದ ಚುನಾವಣಾ ಪ್ರಚಾರದ ಕೊನೆಯ ದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 15 ದಿನಗಳ ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ತಮ್ಮದೇ ಹೆಸರನ್ನು 758 ಬಾರಿ ಮತ್ತು 232 ಬಾರಿ ಕಾಂಗ್ರೆಸ್ ಹೆಸರನ್ನು ಉಚ್ಚರಿಸಿದ್ದಾರೆ. ಆದರೆ, ಒಂದು ಬಾರಿಯೂ ನಿರುದ್ಯೋಗದ ಕುರಿತು ಮಾತನಾಡಿಲ್ಲ ಎಂದು ಹೇಳಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚಿಸಲಿದೆ. ಜೂನ್ 4ರಂದು ಪರ್ಯಾಯ ಸರ್ಕಾರಕ್ಕೆ ಜನಾದೇಶ ದೊರೆಯುತ್ತದೆ ಎಂಬ ವಿಶ್ವಾಸವಿದೆ. ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಅವಕಾಶ ದೊರೆತರೆ ಅದು ಪ್ರಜಾಪ್ರಭುತ್ವದ ಅಂತ್ಯ ಎಂದು ಜನರು ಕೂಡ ಒಪ್ಪಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


