nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಚಾರ ನಿಯಮ ಪಾಲನೆ ಪ್ರಜ್ಞಾವಂತ ನಾಗರಿಕರ ಮೊದಲ ಕರ್ತವ್ಯ: ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ
    ರಾಜ್ಯ ಸುದ್ದಿ May 30, 2024

    ಸಂಚಾರ ನಿಯಮ ಪಾಲನೆ ಪ್ರಜ್ಞಾವಂತ ನಾಗರಿಕರ ಮೊದಲ ಕರ್ತವ್ಯ: ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ

    By adminMay 30, 2024No Comments3 Mins Read
    dharavada

    ಧಾರವಾಡ:  ಪ್ರತಿ ವರ್ಷ ಅನೇಕ ವಾಹನ ಸವಾರರು ಹಾಗೂ ಸಂಚಾರಿಗಳು ಸಂಚಾರಿ ನಿಯಮ ಉಲ್ಲಂಘನೆಯಿಂದ ಜೀವ ಕಳೆದುಕೊಳ್ಳುತ್ತಾರೆ. ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರಜ್ಞಾವಂತ ನಾಗರಿಕರ ಮೊದಲ ಕರ್ತವ್ಯವಾಗಿದೆ ಎಂದು ಹುಬ್ಬಳ್ಳಿ– ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಹೇಳಿದರು.

    ಅವರು ಮೇ.29 ಸಂಜೆ ಧಾರವಾಡ ನಗರದ ಆಲೂರು ವೆಂಕಟರಾವ್ (ಜುಬ್ಲಿ ಸರ್ಕಲ್) ವೃತ್ತದಲ್ಲಿ ಸಂಚಾರ ನಿಯಮಗಳ ಸಾರ್ವಜನಿಕ ಜಾಗೃತಿ ಹಾಗೂ ದೋಷಪೂರಿತ ಸೈಲೆನ್ಸರ್‍ ಗಳ ನಾಶಪಡಿಸುವ ಕಾರ್ಯಕ್ಕೆ ಚಾಲನೆ ನೀಡಿ, ಮಾತನಾಡಿದರು.

    ಸಂಚಾರ ನಿಯಮಗಳ ಕುರಿತು ಪ್ರತಿ ವರ್ಷ ವಿವಿಧ ಕಾರ್ಯಕ್ರಮಗಳ ಮೂಲಕ ಶಾಲಾ ಕಾಲೇಜುಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಆದರೂ ವಾಹನ ಸವಾರರು ಸರಿಯಾಗಿ ಹೆಲ್ಮೆಟ್ ಧರಿಸುವುದಿಲ್ಲ, ಸೀಟ್ ಬೆಲ್ಟ್ ಧರಿಸುವುದಿಲ್ಲ, ಸಿಗ್ನಲ್ ಜಂಪ್ ಮಾಡುವುದು, ಸಂಚಾರಿ ಸಾಮಾನ್ಯ ನಿಯಮಗಳನ್ನು ಸಹ ಪಾಲಿಸುವುದಿಲ್ಲ. ಇದರಿಂದಾಗಿ ತಮ್ಮ ಅಮೂಲ್ಯ ಜೀವವನ್ನೇ ಕಳೆದುಕೊಳ್ಳುತ್ತಾರೆ ಎಂದು ಅವರು ತಿಳಿಸಿದರು.

    ಅವಳಿ ನಗರದಲ್ಲಿ ವಾಹನ ದಟ್ಟಣೆ ಮಾರ್ಗಗಳನ್ನು ಗುರುತಿಸಲಾಗಿದೆ. ಅವುಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಪರಿಶೀಲಿಸಲಾಗುತ್ತಿದೆ. ಪಾಲಕರು 18 ವರ್ಷ ದೊಳಗಿನ ಮಕ್ಕಳಿಗೆ ವಾಹನ ಚಾಲನೆಗೆ ನೀಡಬಾರದು. ಇದು ಅಪರಾಧವಾಗಿದ್ದು, ಅಂತ ಪಾಲಕರಿಗೆ ರೂ. 25 ಸಾವಿರ ದಂಡ ಮತ್ತು ಜೈಲುವಾಸದ ಶಿಕ್ಷೆ ಇದೆ. ಸಾರ್ವಜನಿಕರ ಸಹಕಾರದಿಂದ ಮಾತ್ರ ಸುಗಮ ಮತ್ತು ಸುಸೂತ್ರ ಸಂಚಾರ ಹೊಂದಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

    ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೋಟಾರ್ ಸೈಕಲ್ ಸವಾರರು ತಮ್ಮ ವಾಹನಗಳಿಗೆ ಅನಧಿಕೃತವಾಗಿ ದೋಷಪೂರಿತ ಕರ್ಕಶ ಶಬ್ದವನ್ನು ಉಂಟು ಮಾಡುವ ಸೈಲೆನ್ಸರ್ ಗಳನ್ನು ಹಾಕಿಕೊಂಡು, ಸಂಚರಿಸಿ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ತಂಡವನ್ನು ರಚಿಸಿ ಜಾಗೃತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

    ಮಾರ್ಚ್ 1, 2024 ರಿಂದ ಮೇ 29, 2024 ರವರೆಗಿನ ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 240 ಸೈಲೆನ್ಸರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಇವುಗಳ ಮೌಲ್ಯ ಸುಮಾರು ರೂ. 12 ಲಕ್ಷಗಳಾಗಿದೆ. ದೋಷಪೂರಿತ ಕರ್ಕಶ ಸೈಲೇನ್ಸರ್ ಗಳನ್ನು ವಶಪಡಿಸಿಕೊಂಡು ವಾಹನ ಸವಾರರಿಗೆ ತಲಾ 500 ರೂ. ದಂಡ ವಿಧಿಸಿ, ವಾಹನಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

    ಮುಂದಿನ ದಿನಗಳಲ್ಲಿ ಯಾವುದಾದರೂ ದೋಷಪೂರಿತ ಸೈಲೆನ್ಸರ್ ಸೈಕಲ್ ಮೋಟಾರ ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಮೋಟಾರ್ ಸೈಕಲ್ ನಂಬರ್  ಸಮೇತ ಫೋಟೋ, ವಿಡಿಯೋ ಮೂಲಕ ಸಂಚಾರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 9480802037 ಗೆ ವಾಟ್ಸಪ್ ಮೂಲಕ ಕಳುಹಿಸಬಹುದು. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಈ ಸಂದರ್ಭದಲ್ಲಿ ತಿಳಿಸಿದರು.

    3 ವರ್ಷಗಳ ರಸ್ತೆ ಅಪಘಾತದ ವಿವರ: 2022 ರ ರಸ್ತೆ ಅಪಘಾತದಲ್ಲಿ 97 ಪುರುಷರು, 14 ಮಹಿಳೆಯರು ಸೇರಿ ಒಟ್ಟು 111 ಜನ ಮರಣ ಹೊಂದಿದ್ದು, 419 ಪುರುಷರು, 87 ಮಹಿಳೆಯರು ಸೇರಿ ಒಟ್ಟು 506 ಜನ ತೀವ್ರ ಗಾಯಗೊಂಡಿದ್ದಾರೆ. 2023 ರ ರಸ್ತೆ ಅಪಘಾತದಲ್ಲಿ 100 ಪುರುಷರು, 17 ಮಹಿಳೆಯರು ಸೇರಿ ಒಟ್ಟು 117 ಜನ ಮರಣ ಹೊಂದಿದ್ದು, 454 ಪುರುಷರು, 105 ಮಹಿಳೆಯರು ಸೇರಿ ಒಟ್ಟು 559 ಜನ ತೀವ್ರ ಗಾಯಗೊಂಡಿದ್ದಾರೆ. 2024 ರ ಜನವರಿಯಿಂದ ಇಂದಿನ ವರೆಗೆ ರಸ್ತೆ ಅಪಘಾತದಲ್ಲಿ 30 ಪುರುಷರು, 4 ಮಹಿಳೆಯರು ಸೇರಿ ಒಟ್ಟು 34 ಜನ ಮರಣ ಹೊಂದಿದ್ದು, 113 ಪುರುಷರು, 15 ಮಹಿಳೆಯರು ಸೇರಿ ಒಟ್ಟು 128 ಜನ ತೀವ್ರ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದರು.

    3 ವರ್ಷದ ಎಂ.ವಿ ಆಯಾಕ್ಟ್ ಮತ್ತು ನ್ಯಾಯಾಲಯದಿಂದ ಸಂಚಾರ ನಿಯಮ ಉಲ್ಲಂಘನೆ ಅಡಿಯಲ್ಲಿ ವಸೂಲಿ ಮಾಡಲಾದ ದಂಡದ ವಿವರ: 2022 ರಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 1,40,416 ಅಪರಾಧಗಳು ದಾಖಲಾಗಿವೆ. 66,167,100 ರೂ.ಗಳ ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಲಾಗಿದ್ದು, 1,28,64,100 ರೂ.ಗಳ ದಂಡವನ್ನು ನ್ಯಾಯಾಲಯದಿಂದ ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ 7,90,31,200 ರೂ.ಗಳ ದಂಡ ವಸೂಲಿ ಮಾಡಲಾಗಿದೆ. 2023 ರಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 1,91,883 ಅಪರಾಧಗಳು ದಾಖಲಾಗಿವೆ. 7,52,65,125 ರೂ.ಗಳ ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಲಾಗಿದ್ದು, 1,83,61,000 ರೂ.ಗಳ ದಂಡವನ್ನು ನ್ಯಾಯಾಲಯದಿಂದ ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ 9,36,26,125 ರೂ.ಗಳ ದಂಡ ವಸೂಲಿ ಮಾಡಲಾಗಿದೆ. 2024 ರ ಜನವರಿಯಿಂದ ಇಂದಿನ ವರೆಗೆ ಸಂಚಾರ ನಿಯಮ ಉಲ್ಲಂಘಿಸಿದ 54,468 ಅಪರಾಧಗಳು ದಾಖಲಾಗಿವೆ. 2,60,54,400 ರೂ.ಗಳ ದಂಡವನ್ನು ಸ್ಥಳದಲ್ಲಿಯೇ ವಸೂಲಿ ಮಾಡಲಾಗಿದ್ದು, 69,51,500 ರೂ.ಗಳ ದಂಡವನ್ನು ನ್ಯಾಯಾಲಯದಿಂದ ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ 3,30,05,900 ರೂ.ಗಳ ದಂಡ ವಸೂಲಿ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

    ಕಾರ್ಯಕ್ರಮದಲ್ಲಿ ಉಪ ಪೊಲೀಸ್ ಆಯುಕ್ತರಾದ ಕುಶಲ್ ಚೌಕ್ಸೆ, ರವೀಶ ಸಿ.ಆರ್., ಸಂಚಾರ ಸಹಾಯಕ ಪೊಲೀಸ್ ಆಯುಕ್ತ ವಿನೋದ ಮುಕ್ತೆದಾರ, ಸಂಚಾರಿ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀನಿವಾಸ ಮೇಟಿ, ಪಿಎಸ್‍ ಐ ನಾರಾಯಣ ಪಟವರ್ಧನ, ಶೋಭಾ ಕಂಬಿ, ಸೇರಿದಂತೆ ಇತರ ಪೊಲೀಸ್ ಅಧಿಕಾರಿ, ಸಿಬ್ಬಂದಿ  ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ಯಮಕಿಂಕರ ರೂಪಕದ ಮೂಲಕ ಸಂಚಾರ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ತುಮಕೂರು: ಎಸ್‌ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ…

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.