ಅಶ್ಲೀಲ ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.
ದೇಶ ಬಿಟ್ಟು ಪರಾರಿಯಾದ ಒಂದು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ಅಲ್ಲದೆ ಲುಫ್ತಾನ್ಸ ವಿಮಾನದಲ್ಲಿ 30ನೇ ತಾರೀಕಿನಂದು ವಿಮಾನ ಬುಕ್ ಸಹ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದರು.
ರಾಜ್ಯದಲ್ಲಿ ಏಪ್ರಿಲ್ 26ರಂದು ನಡೆದ ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಬಳಿಕ ಏಪ್ರಿಲ್ 27ರಂದು ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದರು. ಇದೀಗ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದಿರುವ ಎಸ್ ಐಟಿ ಪೊಲೀಸರು ಎಸ್ ಐಟಿ ಕಚೇರಿಗೆ ಕರೆತಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


