ಕೇರಳದಲ್ಲಿ ನನ್ನ ವಿರುದ್ಧ ಅಘೋರಿಗಳ ಮೂಲಕ ಪ್ರಯೋಗ ನಡೀತಿದೆ. ಯಾರು ಮಾಡಿಸುತ್ತಿದ್ದಾರೆ ಎಂಬ ವಿಚಾರವೂ ನನಗೆ ಗೊತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಈ ಕುರಿತು ಸುದ್ದಿಗೋಷ್ಠಿಸಿ ಈ ವಿಷಯ ತಿಳಿಸಿದ್ದಾರೆ. ನನ್ನ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇರಳದ ರಾಜರಾಜೇಶ್ವರಿ ದೇವಾಲಯದಲ್ಲಿ ಅಘೋರಿಗಳ ಮೂಲಕ ಪೂಜೆ ಮಾಡಿಸಲಾಗಿದೆ. ನನ್ನ ವಿರುದ್ಧ ವಿರೋಧಿಗಳು ದೊಡ್ಡ ಪ್ರಯೋಗ ಮಾಡಿಸುತ್ತಿದ್ದಾರೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನನ್ನ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾಗ ಮಾಡಿಸಿದ್ದಾರೆ. ಮೇಕೆ, ಹಂದಿ, ಕುರಿ, ಬಲಿ ಸೇರಿದಂತೆ ಪಂಚ ಬಲಿ ಕೊಟ್ಟಿದ್ದಾರೆ ಎಂದು ಹೇಳಿದರು.
ಅಘೋರಿಗಳ ಮೂಲಕ ಶತ್ರು ಬೈರವಿ ಯಾಗ, ಪಂಚ ಬಲಿ ಕೊಡುತ್ತಿದ್ದಾರೆ. ಇದನ್ನೆಲ್ಲಾ ಯಾರು ಮಾಡಿಸುತ್ತಿದ್ದಾರೆ ಎಂಬುದು ನಮಗೆ ಗೊತ್ತು. ನಾವು ನಂಬಿದ ದೇವರು ನಮ್ಮ ಕೈ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇತ್ತ ಡಿ.ಕೆ. ಶಿವಕುಮಾರ್ ಹೇಳಿಕೆ ಕರ್ನಾಟಕ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


