ಶ್ರೀನಗರ: ಉತ್ತರ ಪ್ರದೇಶದ ಹತ್ರಾಸ್ ನಿಂದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಒಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಮೃತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಇನ್ನೂ ಘಟನೆಯಲ್ಲಿ 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಜಮ್ಮುವಿನ ಉಪಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಘಟನೆ ನೆನೆದು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸಹ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


