ಸ್ವಾಮಿ ವಿವೇಕಾನಂದರ ಅಧ್ಯಾತ್ಮದ ಪ್ರಿಯ ತಾಣ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನಸ್ಥರಾಗಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರ ಒತ್ತಡಗಳಿಂದ ಬಿಡುವು ಪಡೆದು ಪ್ರಕೃತಿಯ ಪ್ರಶಾಂತ ತಾಣದಲ್ಲಿ ಆಧ್ಯಾತ್ಮಿಕ ಅನುಭೂತಿ ಪಡೆಯುತ್ತಿದ್ದಾರೆ.
ಸುಮಾರು 45 ಗಂಟೆಗಳ ಕಾಲ ಮೋದಿ ಅವರು ಕನ್ಯಾಕುಮಾರಿಯಲ್ಲಿ ಇರಲಿದ್ದು ಭಾರೀ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸ್ಥಳದಲ್ಲಿ ಸುಮಾರು 2,000 ಪೊಲೀಸರ ಹೊರತಾಗಿ ವಿವಿಧ ಭದ್ರತಾ ಏಜೆನ್ಸಿಗಳು ಕಟ್ಟುನಿಟ್ಟಿನ ನಿಗಾ ವಹಿಸುತ್ತಿದೆ. ಅಷ್ಟೇ ಅಲ್ಲ, ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಭಾರತೀಯ ನೌಕಾಪಡೆಯು ಕಡಲ ಗಡಿಗಳಲ್ಲಿ ಕಣ್ಗಾವಲಿದೆ.
2019ರಲ್ಲಿ ಚುನಾವಣಾ ಪ್ರಚಾರ ಮುಗಿದ ಬಳಿಕ ಪ್ರಧಾನಿ ಮೋದಿ ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಿದ್ದರು. ಈಗ ಕನ್ಯಾಕುಮಾರಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296