ತುಮಕೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಸಿಬ್ಬಂದಿ ಪಾವಗಡದಲ್ಲಿ ಪರಸ್ಪರ ಹೊಡೆದಾಡಿದ್ದ ಘಟನೆಗೆ ಸಂಬಂಧಿಸಿದಂತೆ ಕಿರಿಯ ಇಂಜಿನಿಯರ್ (ವಿ) ವರದರಾಜು, ಮೆಕಾನಿಕ್ ಗ್ರೇಡ್-1 ನರಸಿಂಹಮೂರ್ತಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಹೊಡೆದಾಡಿದ್ದ ಸಿಬ್ಬಂದಿಯನ್ನು ಅಮಾನತುಗೊಳಿಸಿ ತುಮಕೂರಿನ ಪ್ರಸರಣ ವೃತ್ತದ ಅಧೀಕ್ಷಕ ಇಂಜಿನಿಯರ್ ಅವರು ಮೇ 31 ರಂದು ಆದೇಶ ಹೊರಡಿಸಿದ್ದಾರೆ ಎಂದು ಕೆಪಿಟಿಸಿಎಲ್ ಪ್ರಕಟಣೆ ತಿಳಿಸಿದೆ.
ಇದೇ ಪ್ರಕರಣ ಸಂಬಂಧ ಕೆಪಿಟಿಸಿಎಲ್ ನ ನೌಕರರಾದ ಕಿರಿಯ ಇಂಜಿನಿಯರ್ (ವಿ) ಶ್ರೀನಿವಾಸ, ಎಸ್.ಎ ಗ್ರೇಡ್-2 ಸಂತೋಷ ಎಂಬುವವರಿಗೆ ನೋಟಿಸ್ ಜಾರಿಮಾಡಲಾಗಿದೆ.
ಪಾವಗಡದ ಪಟ್ಟಣದ ಹೊರವಲಯದ ತೋಟದಲ್ಲಿ ಮೇ 23ರಂದು ಕಚೇರಿ ಸಮಯದಲ್ಲೇ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದರು. ಈ ಪ್ರಕರಣ ಸಂಬಂಧ ಕೆಪಿಟಿಸಿಎಲ್ ಶಿಸ್ತು ಕ್ರಮ ಕೈಗೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA