ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಮತದಾನವು ಜೂನ್ 3ರಂದು ಪೂರ್ವಾಹ್ನ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.
ಎಲ್ಲಾ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂ.3ರ ಸೋಮವಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ಸರಕಾರ ಆದೇಶ ಹೊರಡಿಸಿದೆ.
ಮತದಾರರು ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಆಯಾ ತಾಲೂಕು ಕಚೇರಿಗಳಲ್ಲಿ ಪರಿಶೀಲಿಸಿ ಖಚಿತಪಡಿಸಿ ಕೊಳ್ಳಬಹುದು. ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್)ಯನ್ನು ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಎಪಿಕ್ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಇಂಡಿಯನ್ ಪಾಸ್ಪೋರ್ಟ್ ಇತ್ಯಾದಿಗಳಲ್ಲಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


