ಈ ವರ್ಷ, ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಹೆಚ್ಚಿನ ಮಳೆಯಾಗಲಿದೆ.
ರಾಜ್ಯದಲ್ಲಿ ಈ ಬಾರಿ ಉತ್ತಮ ಮುಂಗಾರು ಆಗಲಿದ್ದು, ಇದು ಕೃಷಿ ಕ್ಷೇತ್ರದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ನೀರಿನ ಕೊರತೆಯನ್ನು ನಿವಾರಿಸಲು ಇದು ಗಮನಾರ್ಹವಾಗಿ ಸಹಾಯ ಮಾಡುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮೇ 31 ರಿಂದ ರಾಜ್ಯದಲ್ಲಿ ಮಾನ್ಸೂನ್ ಪ್ರಾರಂಭವಾಗಿದ್ದು, ಜೂನ್ 5 ರ ಸುಮಾರಿಗೆ ಎಲ್ಲೆಡೆ ಮಳೆ ಆರಂಭವಾಗಲಿದೆ. ಆದಾಗ್ಯೂ, ಚಂಡಮಾರುತಗಳಿಂದ ಬದಲಾವಣೆಗಳಾದರೆ ಮುಂಗಾರು ಇನ್ನೂ ನಾಲ್ಕೈದು ದಿನ ವಿಳಂಬವಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


