ಸರಗೂರು: ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾನ್ ಮಾತನಾಡಿ, “ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು, ಮಾಜಿ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರಾದ ಬಿಜೆ ವಿಜಯಕುಮಾರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು” ಎಂದರು.
“ವಿಧಾನಪರಿಷತ್ತಿಗೆ ಜೂನ್ ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಇವರುಗಳಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿ ವಿಧಾನ ಪರಿಷತ್ ಗೆ ಕಳುಹಿಸಿದಲ್ಲಿ, ಈ ಭಾಗದಲ್ಲಿ ಸರ್ಕಾರದ ಯೋಜನೆಗಳು ಯಶಸ್ವಿ ಮುಖಾಂತರ ಜಾರಿಯಾಗಿ, ಪಕ್ಷದ ಕಾರ್ಯಕರ್ತರ ಬೆಳವಣಿಗೆಗೂ ಸಹಕಾರಿಯಾಗಲಿದೆ” ಎಂದರು.
“ಯತೀಂದ್ರ ಸಿದ್ದರಾಮಯ್ಯರವರು, ಬಿ.ಜೆ. ವಿಜಯಕುಮಾರ್ ಇವರುಗಳು, ಕೋಟೆ ಸರಗೂರು ನಂಜನಗೂಡು, ಗುಂಡ್ಲುಪೇಟೆ, ನರಸೀಪುರ ಇನ್ನಿತರ ಎಲ್ಲಾ ತಾಲ್ಲೂಕಿನಲ್ಲೂ ಹಗಲು ಇರುಳು ಭರ್ಜರಿ ಮತ ಯಾಚನೆ ಮಾಡಿ ಲೋಕಸಭಾ ಚುನಾವಣೆಯಲ್ಲಿ ವಿವಿಧೆಡೆ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. ಜನಪರ ಕೆಲಸ ಮಾಡುವ ಮೂಲಕ ಕಾರ್ಯಕರ್ತರು ಹಾಗೂ ವರುಣ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿದ್ದಾರೆ. ಅದೇ ರೀತಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರಾಗಿರುವ ಡಾ.ಬಿ.ಜೆ. ವಿಜಯಕುಮಾರ್ ಅವರು ಪಕ್ಷದ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಆದ್ದರಿಂದ ಈ ಇಬ್ಬರಿಗೂ ವಿಧಾನ ಪರಿಷತ್ ನಲ್ಲಿ ಸ್ಥಾನ ಕಲ್ಪಿಸಿದರೆ ಇನ್ನೂ ಹೆಚ್ಚಿನ ರೀತಿಯಲ್ಲಿ ಪಕ್ಷ ಮತ್ತು ಕ್ಷೇತ್ರ ಅಭಿವೃದ್ಧಿ ಹೊಂದಲಿದೆ” ಎಂದಿದ್ದಾರೆ.
ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು, ಮಾಜಿ ಶಾಸಕ ಡಾ. ಯಂತಿಂದ್ರ ಮತ್ತು ಡಾ. ಬಿ.ಜೆ. ವಿಜಯಕುಮಾರ್ ರವರಿಗೆ ವಿಧಾನಪರಿಷತ್ ಗೆ ಟಿಕೆಟ್ ನೀಡಿ ಸದಸ್ಯರನ್ನಾಗಿಸಿ ಎಂದು ಮನವಿ ಮಾಡಿಕೊಂಡರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


