ಎಲ್ಲರ ಕಣ್ಣು ರಾಫಾ ಮೇಲೆ… ಎಂಬ ಸಾಲುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.. ಏನಿದು ? ಪ್ಯಾಲೆಸ್ಟೀನಿಯನ್ನರ ಬೆಂಬಲಕ್ಕೆ ಪ್ರಪಂಚದಾದ್ಯಂತದ ಜನರು ನಿಂತಿದ್ದಾರೆ. ಇದೇ ಕಾರಣಕ್ಕೆ ಈ ವಿಚಾರ ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್’ನಲ್ಲಿ ಭಾರೀ ಟ್ರೆಂಡಿಂಗ್ ಆಗಿತ್ತು.
ಭಾರತದಲ್ಲಿನ ಇರಾನ್ ರಾಯಭಾರ ಕಚೇರಿ, ‘All Eyes on Rafah’ ಎಂದು ಹೇಳಿತ್ತು. ಗಾಜಾ ಪಟ್ಟಿಯ ದಕ್ಷಿಣದ ರಫಾ ಎಂಬಲ್ಲಿನ ಕ್ಯಾಂಪ್’ಗಳ ಮೇಲೆ ಇಸ್ರೇಲ್ ಭಾನುವಾರ ಸಂಜೆ ಬಾಂಬ್ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಲ್ಲದೆ, ಕೆಲವರು ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ 1.4 ಮಿಲಿಯನ್’ಗಿಂತಲೂ ಹೆಚ್ಚು ಪ್ಯಾಲೆಸ್ಟೀನಿಯನ್ನರು ಆಶ್ರಯ ಪಡೆಯುತ್ತಿದ್ದಾರೆ.
ಗಾಜಾದ ರಾಫಾ ನಗರದ ಮೇಲೆ ಇಸ್ರೇಲ್ ನ ವಾಯುದಾಳಿಗೆ ಜಗತ್ತಿನಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಎಲ್ಲರ ಕಣ್ಣು ರಾಫಾ ಮೇಲೆ ಎಂಬ ಪೋಸ್ಟರ್ ಅನ್ನು ಸೆಲೆಬ್ರಿಟಿಗಳು, ಸಿನಿಮಾ ನಟರು, ಕ್ರೀಡಾಪಟುಗಳು ಹಾಕಿಕೊಂಡಿದ್ದರು. ಜಾಗತಿಕ ಮಟ್ಟದಲ್ಲಿ ಎರಡು ದೇಶಗಳ ನಡುವೆ ಪೋಸ್ಟರ್ ವಾರ್ ನಡೆಯುತ್ತಿದ್ದು, “ಆಲ್ ಐಸ್ ಆನ್ ರಾಫಾ” ಎಂಬ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA