ಬೆಂಗಳೂರು: ಕರ್ನಾಟಕದ ಹೈಕೋರ್ಟ್‍ನ ನೂತನ ನ್ಯಾಯಮೂರ್ತಿಗಳಾಗಿ ನ್ಯಾ. ವಲ್ಲೂರಿ ಕಾಮೇಶ್ವರ ರಾವ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದರು.
ಶನಿವಾರ ಇಲ್ಲಿನ ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿಗಳಿಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ನಿಲಯ್ ವಿಪಿನ್‍ಚಂದ್ರ ಅಂಜಾರಿಯಾ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಸೇರಿದಂತೆ ನ್ಯಾಯಮೂರ್ತಿಗಳು, ವಕೀಲರು, ಗಣ್ಯರುಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


