nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026
    Facebook Twitter Instagram
    ಟ್ರೆಂಡಿಂಗ್
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    • ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ
    • ಉಪ್ಪಾರ ಜನಾಂಗದವರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ
    • ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಗೆ ಥಳಿಸಿ, ಕೀಟನಾಶಕವನ್ನು ಬಾಯಿಗೆ ಸುರಿದು ಮಹಿಳೆಯ ಮೇಲೆ ದೌರ್ಜನ್ಯ
    ರಾಜ್ಯ ಸುದ್ದಿ June 2, 2024

    ಮಹಿಳೆಗೆ ಥಳಿಸಿ, ಕೀಟನಾಶಕವನ್ನು ಬಾಯಿಗೆ ಸುರಿದು ಮಹಿಳೆಯ ಮೇಲೆ ದೌರ್ಜನ್ಯ

    By adminJune 2, 2024No Comments1 Min Read
    lakno

    ಲಕ್ನೋ: ಪತಿ ಮತ್ತು ಮಾವ ಸೇರಿ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ಥಳಿಸಿದ್ದಲ್ಲದೇ ಆಕೆಯ ಬಾಯಿಗೆ ಕೀಟನಾಶಕವನ್ನು ಸುರಿದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ ಹಾಪುರ ಜಿಲ್ಲೆಯಲ್ಲಿ ನಡೆದಿದೆ. ಪತಿ ಮತ್ತು ಮಾವ ಮಹಿಳೆಗೆ ಥಳಿಸಿದ್ದಲ್ಲದೆ, ಆಕೆಯನ್ನು ಕೊಲ್ಲುವ ಉದ್ದೇಶದಿಂದ ಬೆಳೆಗೆ ಬಳಸುವ ಕೀಟನಾಶಕವನ್ನು ಆಕೆಯ ಬಾಯಿಗೆ ಸುರಿದಿದ್ದಾರೆ.

    ಈ ವೇಳೆ ಸಹೋದರ ವಿರೋಧ ವ್ಯಕ್ತಪಡಿಸಿದಾಗ ಆರೋಪಿಗಳು ಆತನಿಗೂ ಥಳಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆ ವಿವರ: ಹಾಪುರ್ ಜಿಲ್ಲೆಯ ಗರ್ಮುಕ್ತೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಗದ್‌ಪುರ ಗ್ರಾಮದ ನಿವಾಸಿ ಶೀಲಾ ಅವರು ಗಜ್ರೌಲಾ ಪೊಲೀಸ್ ಠಾಣಾ ವ್ಯಾಪ್ತಿಯ ಫಿರೋಜ್‌ಪುರ ಗ್ರಾಮದ ಸುರೇಂದ್ರ ಎಂಬಾತನನ್ನು ವಿವಾಹವಾಗಿದ್ದರು. ಮಂಗಳವಾರ ರಾತ್ರಿ 8.30ರ ಸುಮಾರಿಗೆ ಪೋಷಕರಿಗೆ ಶೀಲಾಳ ಮೇಲೆ ನಡೆದ ಹಲ್ಲೆಯ ಬಗ್ಗೆ ಮಾಹಿತಿ ಲಭಿಸಿದೆ.

    ವಿಚಾರ ಗೊತ್ತಾಗುತ್ತಿದ್ದಂತೆಯೇ ಶೀಲಾಳ ಸಹೋದರ ಜಯಪ್ರಕಾಶ್ ತನ್ನ ಸ್ನೇಹಿತನ ಜೊತೆ ನೇರವಾಗಿ ಆಕೆಯ ಮನೆಗೆ ಬಂದರು. ಈ ವೇಳೆ ಸಹೋದರನ ಮುಂದೆಯೇ ಪತಿ ಮತ್ತು ಮಾವ ಸೇರಿ ಆಕೆಯ ಕೈಕಾಲು ಕಟ್ಟಿ ಥಳಿಸಿದ್ದಾರೆ. ಇದನ್ನು ಕಣ್ಣಾರೆ ಕಂಡ ಸಹೋದರ ತಡೆಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಆತನ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಸಹೋದರನ ಸಮ್ಮುಖದಲ್ಲಿಯೇ ಆರೋಪಿಗಳಿಬ್ಬರೂ ಬೆಳೆಗೆ ಬಳಸುವ ಕೀಟನಾಶಕವನ್ನು ಆಕೆಯ ಬಾಯಿಗೆ ಬಲವಂತವಾಗಿ ಸುರಿದಿದ್ದಾರೆ. ಪರಿಣಾಮ ಆಕೆಯ ಸ್ಥಿತಿ ಹದಗೆಟ್ಟಿದೆ. ಕೂಡಲೇ ಮಹಿಳೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರಿ ಇನ್ಸ್‌ಪೆಕ್ಟರ್ ಹರೀಶ್ ವರ್ಧನ್ ಸಿಂಗ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಚಿಕ್ಕನಾಯಕನಹಳ್ಳಿ: ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರ ಮನವಿಗೆ ಸ್ಪಂದಿಸಿ ತಾಲೂಕಿನ ಕಸಬಾ ಹೋಬಳಿಯ ದುರ್ಗದಕೆರೆ ಹಾಗೂ…

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.