ಚಿಕ್ಕಬಳ್ಳಾಪುರ: ತಾಲೂಕಿನ ಮಂಚೇನಹಳ್ಳಿ ಬಳಿ ಇರುವ ದಂಡಿಗಾನಹಳ್ಳಿ ಡ್ಯಾಮ್ ನಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಮುಂಬೈ ಮೂಲದ ಆಲಿಯಾ ಪಾಟೀಲ್(17) ಹಾಗೂ ಜೋಯ ಪಾಟೀಲ್(14) ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ಮುಂಬೈ ಮೂಲದ ಬಾಲಕಿಯರು ಗೌರಿಬಿದನೂರು ನಗರದ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇನ್ನೆರಡು ದಿನಗಳ ನಂತರ ಮುಂಬೈಗೆ ವಾಪಸ್ ಆಗಲಿದ್ದರು. ದಂಡಿಗಾನಹಳ್ಳಿ ಜಲಾಶಯವನ್ನು ಕಣ್ತುಂಬಿಕೊಳ್ಳಬೇಕು ಎಂದು ಜಲಾಶಯಕ್ಕೆ ಹೋದವರು ಜಲಾಶಯದ ಬಳಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳೀಯರು ಇಬ್ಬರ ಮೃತದೇಹವನ್ನು ನೀರಿನಿಂದ ಮೇಲೆ ತಂದಿದ್ದಾರೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


