ಚಂಡೀಗಢ: ಪಂಜಾಬ್ ನಲ್ಲಿ ಸಿರ್ಹಿಂದ್ ನ ಮಾಧೋಪುರ ಬಳಿ ಭಾನುವಾರ ಬೆಳಗ್ಗೆ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ನಿಂತಿದ್ದ ಸರಕು ಸಾಗಣೆ ರೈಲಿಗೆ ಹಿಂದಿನಿಂದ ಮತ್ತೊಂದು ರೈಲು ಡಿಕ್ಕಿ ಹೊಡೆದು, ಇಬ್ಬರು ಲೋಕೋ ಪೈಲಟ್ ಗಳು ಗಾಯಗೊಂಡಿದ್ದಾರೆ.
ಗಾಯಗೊಂಡ ಪೈಲಟ್ ಗಳನ್ನು ಫತೇಘರ್ ಸಾಹಿಬ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಗಾಯಗೊಂಡಿರುವ ಲೋಕೋ ಪೈಲಟ್ ಗಳನ್ನು ವಿಕಾಸ್ ಕುಮಾರ್ ಮತ್ತು ಹಿಮಾಂಶು ಕುಮಾರ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


