ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದ ರಾಯಸಂದ್ರದಲ್ಲಿ ಲೈನ್ ಮ್ಯಾನ್ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರಾಯಚೂರು ಮೂಲದ ನಾಗರಾಜು ಬಡಿಗೇರ್ (28) ಮೃತ ಬೆಸ್ಕಾಂ ಸಿಬ್ಬಂದಿಯಾಗಿದ್ದಾರೆ.
ಬೆಂಗಳೂರಿನ ವೀರಸಂದ್ರ ಸಬ್ ಡಿವಿಷನ್ ನಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಬೆಸ್ಕಾಂ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದ ನಾಗರಾಜು ಮಧ್ಯಾಹ್ನ ರಾಯಸಂದ್ರ ಬಳಿ ವಿದ್ಯುತ್ ಲೈನ್ ಸರಿಪಡಿಸುವ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಕಂಬದ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡಿದ್ದ ಬೆಸ್ಕಾಂ ಸಿಬ್ಬಂದಿಯನ್ನು ಕೂಡಲೇ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೂ ಆಸ್ಪತ್ರೆಗೆ ಬರುವ ವೇಳೆಗೆ ನಾಗರಾಜು ಬಡಿಗೇರ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


