ಪಲ್ಲಕ್ಕಿ ಟ್ರಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿ ಬಳಿ ಜರುಗಿದೆ. ವೀರಸಂದ್ರ ವಾಸಿ ರಂಗನಾಥ(33) ಯಾರಂಡಹಳ್ಳಿ ವಾಸಿ, ಹರಿಬಾಬು(25) ಮೃತರು ಎನ್ನಲಾಗಿದೆ.
ಗೊಲ್ಲಹಳ್ಳಿ ಗ್ರಾಮದ ಜಾತ್ರೆ ಪಲ್ಲಕಿ ಉತ್ಸವದ ವೇಳೆ ಅವಘಡ ಸಂಭವಿಸಿದೆ. ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗಿ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರಾಕ್ಟರ್ ಚಾಲಕ ಮತ್ತು ಆತನನ್ನು ರಕ್ಷಣೆ ಧಾವಿಸಿದ ವ್ಯಕ್ತಿಗೆ ವಿದ್ಯುತ್ ಶಾಕ್ ದೊರೆತಿದೆ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿಯಿಂದ ರಕ್ಷಣೆ ಮಾಡಲಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಇಬ್ಬರು ಸಾವನ್ನಪ್ಪಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


