ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ವಿಧಾನ ಪರಿಷತ್ ಚುನಾವಣೆಗೆ ಸೋಮವಾರ ಕೊನೆಯ ದಿನವಾಗಿದ್ದು, ಈ ಹಿನ್ನೆಯಲ್ಲಿ 8 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯನಿಗಾಗಿ ವರುಣ ಕ್ಷೇತ್ರ ಬಿಟ್ಟುಕೊಟ್ಟಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ, ಈಗ ವಿಧಾನ ಪರಿಷತ್ ಟಿಕೆಟ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಎನ್.ಎಸ್. ಬೋಸರಾಜು, ವಂಸತ್ ಕುಮಾರ್, ಕೆ. ಗೋವಿಂದ ರಾಜ್, ಐವಾನ್ ಡಿಸೋಜ, ಜಗದೇವ್ ಗುತ್ತೇದಾರ್, ಬಿಲ್ಕಿಸ್ ಬಾನೊ, ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾರ್ದಿಲಿಗೆ ಟಿಕೆಟ್ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


