” ಜೂ.1ರ ನಂತರ ವಾಹನ ಚಾಲನಾ ತರಬೇತಿ ಕೇಂದ್ರಗಳೇ ಡಿ.ಎಲ್. ನೀಡುತ್ತವೆ. ಡಿ.ಎಲ್ ಗಾಗಿ ಸಾರ್ವಜನಿಕರು ಆರ್ ಟಿಒ ಕಚೇರಿಗಳಿಗೆ ಹೋಗಬೇಕಿಲ್ಲಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿಹರಿದಾಡುತ್ತಿದೆ. ಕೆಲ ಮಾಧ್ಯಮಗಳಲ್ಲೂಈ ಸುದ್ದಿ ಪ್ರಕಟವಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟತೆಯಿಲ್ಲ.
ಖಾಸಗಿ ವ್ಯಕ್ತಿಗಳು, ಸ್ವಯಂಸೇವಾ ಸಂಸ್ಥೆಗಳು, ಕಾರ್ಪೊರೇಟ್ ಕಂಪನಿಗಳು, ವಾಹನ ಉತ್ಪಾದನಾ ಕಂಪನಿಗಳು ಅಥವಾ ಯಾವುದೇ ಕಂಪನಿಯೂ ವಾಹನ ಚಾಲನಾ ತರಬೇತಿ ಹಾಗೂ ಚಾಲನಾ ಪರೀಕ್ಷಾ ಕೇಂದ್ರವನ್ನು ಆರಂಭಿಸಬಹುದು. ಒಂದು ಕಂಪನಿಯು ರಾಜ್ಯವೊಂದರಲ್ಲಿಗರಿಷ್ಠ ಐದು ಕೇಂದ್ರಗಳನ್ನಷ್ಟೇ ತೆರೆಯಬಹುದು. ಕೇಂದ್ರಗಳನ್ನು ತೆರೆಯಲು ಕಡ್ಡಾಯವಾಗಿ ಕೆಲ ಮೂಲಸೌಕರ್ಯಗಳನ್ನು ಹೊಂದಿರಬೇಕೆಂದು ಸಚಿವಾಲಯ ಷರತ್ತು ವಿಧಿಸಿದೆ.
ಚಾಲನಾ ತರಬೇತಿ ಕೇಂದ್ರಗಳು ಚಾಲನಾ ಪರೀಕ್ಷೆಯಲ್ಲಿಉತ್ತೀರ್ಣರಾದವರಿಗೆ ಪ್ರಮಾಣಪತ್ರವನ್ನಷ್ಟೇ ನೀಡುತ್ತವೆ. ಆ ಪ್ರಮಾಣಪತ್ರಗಳ ಆಧಾರದಲ್ಲಿಆರ್ ಟಿಒ ಕಚೇರಿಗಳಲ್ಲಿ ಡಿ.ಎಲ್. ನೀಡಲಾಗುತ್ತದೆ. ಡಿ.ಎಲ್. ನೀಡಿಕೆ ವಿಚಾರದಲ್ಲಿ ಆರ್ ಟಿಒಗೆ ಇರುವ ಅಧಿಕಾರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ,” ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೊಸ ಆದೇಶದ ಪ್ರಕಾರ, ಮಾನ್ಯತೆ ಪಡೆದ ಚಾಲನಾ ತರಬೇತಿ ಕೇಂದ್ರಗಳೇ ಚಾಲನಾ ಪರೀಕ್ಷೆ ನಡೆಸಲಿವೆ. ಪರೀಕ್ಷೆಯಲ್ಲಿಉತ್ತೀರ್ಣರಾದವರಿಗೆ ಆಯಾ ಕೇಂದ್ರಗಳೇ ಪ್ರಮಾಣಪತ್ರ ನೀಡಲಿವೆ. ಸಾರ್ವಜನಿಕರು ಡಿ.ಎಲ್.ಗೆ ಅರ್ಜಿ ಹಾಕುವಾಗ ಆ ಪ್ರಮಾಣಪತ್ರ ಸಲ್ಲಿಸಿದರೆ, ಆರ್ ಟಿಒ ಕಚೇರಿಗಳಲ್ಲಿಮತ್ತೆ ಚಾಲನಾ ಪರೀಕ್ಷೆಗೆ ಹಾಜರಾಗಬೇಕಿಲ್ಲಎಂಬ ಸುದ್ದಿ ವೈರಲ್ ಆಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


