ದೇಶದಾದ್ಯಂತ ಲೋಕಸಭೆ ಚುನಾವಣೆಯ ಅತ್ಯಂತ ಪ್ರಮುಖ ಘಟ್ಟದ ಮತ ಎಣಿಕೆ ಇಂದು (ಮಂಗಳವಾರ) ಬೆಳಗ್ಗೆ 7:30ಕ್ಕೆ ಸ್ಟ್ರಾಂಗ್ ರೂಂಗಳನ್ನು ತೆರೆಯುವ ಮೂಲಕ ಆರಂಭವಾಗಿದೆ.
ಬೆಳಗ್ಗೆ 8ಕ್ಕೆ ಅಂಚೆ ಮತಗಳ ಎಣಿಕೆ ಕಾರ್ಯ ಆರಂಭಿಸಲಾಗಿದೆ ಎಂದು ವರದಿ ತಿಳಿಸಿದೆ. ದೇಶದ ವಿವಿಧೆಡೆಯ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆಯಲ್ಲಿ ಮತ ಎಣಿಕೆ ನಡೆಯುತ್ತಿದೆ.
ಸುಮಾರು 64.2 ಕೋಟಿ ಮತದಾರರು ನೀಡಿರುವ ತೀರ್ಪು ಸಂಜೆಯೊಳಗೆ ಸ್ಪಷ್ಟವಾಗಲಿದೆ. ಏಪ್ರಿಲ್ 19ರಿಂದ ಆರಂಭವಾಗಿದ್ದ ಲೋಕಸಭೆ ಚುನಾವಣೆಯ ಮತದಾನ ಜೂನ್ 1ರವರೆಗೂ ಜರುಗಿತ್ತು.
ಹೀಗಾಗಿ ಸುದೀರ್ಘವಾಗಿ ನಡೆದ ಚುನಾವಣಾ ಪ್ರಕ್ರಿಯೆ ಎಂಬ ದಾಖಲೆಯನ್ನೂ ಬರೆದಿದೆ. ಹಲವು ಅಡೆತಡೆಗಳು, ಸಾಕಷ್ಟು ಸವಾಲುಗಳ ಮಧ್ಯೆ ಕೇಂದ್ರ ಚುನಾವಣಾ ಆಯೋಗ ಯಶಸ್ವಿಯಾಗಿ ಚುನಾವಣಾ ಪ್ರಕ್ರಿಯೆ ಮುಗಿಸಿತ್ತು. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಹಲವು ಕಡೆಗಳಲ್ಲಿ ಮುನ್ನಡೆ ಸಾಧಿಸುತ್ತಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA