ಬಿಜೆಪಿ ಪ್ರಾಬಲ್ಯ ಇರುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮಿತ್ರ ಪಕ್ಷಗಳು ಮಿಂಚಿನ ಓಟವನ್ನು ಆರಂಭಿಸಿವೆ. ಮೊದಲ ಸುತ್ತಿನ ಮತದಾನದ ಮುಕ್ತಾಯದ ವೇಳೆಗೆ ಬಿಜೆಪಿ ನೇತೃತ್ವದ ಎನ್ ಡಿಎ 293, ಕಾಂಗ್ರೆಸ್ ನೇತೃತ್ವದ ಐಎನ್ ಡಿಐಎ 214 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿವೆ.
ಸಹಜವಾಗಿಯೇ ಇದು ಕುತೂಹಲ ಕೆರಳಿಸಿದೆ. ಸಿಎಂ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದರು. ತಮ್ಮ ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಭಾರಿ ದೊಡ್ಡ ಮುನ್ನಡೆ ತಂದುಕೊಡುವ ನಿರೀಕ್ಷೆ ಇತ್ತು. ಆದರೆ ಆ ಎಲ್ಲ ನಿರೀಕ್ಷೆಗಳು ಇದೀಗ ತಲೆ ಕೆಳಗಾಗುವ ಸಾಧ್ಯತೆ ಕಂಡು ಬರುತ್ತಿದೆ. ಎಸ್ ಪಿ 30, ಕಾಂಗ್ರೆಸ್ 6, ರಾಷ್ಟ್ರೀಯ ಲೋಕ ದಳ 2 ಸ್ಥಾನವನ್ನು ಪಡೆದುಕೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


