ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ದೇಶದೆಲ್ಲೆಡೆ ಸುಗಮವಾಗಿ ನಡೆಯುತ್ತಿದ್ದು ಅಭ್ಯರ್ಥಿಗಳು ಗೆಲುವಿನ ಲೆಕ್ಕಚಾರದಲ್ಲಿ ಇದ್ದಾರೆ. ಅದರಂತೆ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಫಲಿತಾಂಶ ಹೊರ ಬೀಳಲಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆಯಲ್ಲಿದ್ದಾರೆ.
ಈಗಾಗಲೇ ಮತ ಎಣಿಕೆ ಕಾರ್ಯ ಶುರುವಾಗಿದ್ದು ಚಿಕ್ಕೋಡಿಯ ಕುಡಚಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. 39,836 ಮತಳಿಂದ ಪ್ರಿಯಾಂಕಾ ಜಾರಕಿಹೊಳಿ ಜಾರಕಿಹೊಳಿ ಮುನ್ನುಗ್ಗಿತ್ತಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಆಗಿರುವ ಅಣ್ಣಾಸಾಹೇಬ ಜೊಲ್ಲೆ ಅವರು 31,303 ಪಡೆದ ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಅವರು ಒಟ್ಟು 8,533 ಮತಗಳಿಂದ ಮುನ್ನಡೆಯಲ್ಲಿದ್ದಾರೆ.
ಕುಡಚಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವೇಳೆ ಪ್ರಿಯಾಂಕಾ ಜಾರಕಿಹೊಳಿ 7,000 ಮತಗಳಿಂದ ಮುನ್ನಡೆಯಲ್ಲಿದ್ದರು. ಈಗಾಗಲೇ ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


