ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿದ್ದ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೇರಳದ ಕೋಝಿಕ್ಕೋಡ್ ನಿಂದ ಬಹ್ರೇನ್ ಗೆ ತೆರಳುತ್ತಿದ್ದ ವಿಮಾನ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಕೇರಳ ಮೂಲದ ಅಬ್ದುಲ್ ಮುಸಾವಿರ್ ನಡುಕಂಡಿ(25) ಎಂದು ಗುರುತಿಸಲಾಗಿದೆ. ಆರೋಪಿ ಕೋಝಿಕ್ಕೋಡ್ ನಿಂದ ವಿಮಾನ ಟೇಕಾಫ್ ಆಗುವಾಗ ತಕ್ಷಣವೇ ವಿಮಾನದ ಹಿಂಭಾಗಕ್ಕೆ ತೆರಳಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಭದ್ರತಾ ದೃಷ್ಟಿಯಿಂದ ಪೈಲಟ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (CSMIA) ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


