ನಟ ಪ್ರಕಾಶ್ ರಾಜ್ ಅವರು ಮೊದಲಿನಿಂದಲೂ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಆ ಬಗ್ಗೆ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ. ಈ ಬಾರಿ ಬಿಜೆಪಿಯ ಎನ್ ಡಿಎ 400ಕ್ಕೂ ಹೆಚ್ಚು ಸೀಟ್ ಪಡೆಯುತ್ತದೆ ಎಂದು ಬಹುತೇಕರು ಹೇಳಿದ್ದರು. ಬಿಜೆಪಿ ನಾಯಕರು ಇದನ್ನು ಆಗಾಗ ಪುನರುಚ್ಚರಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಅದೇ ವಿಚಾರವನ್ನು ಇಟ್ಟುಕೊಂಡು ಪ್ರಕಾಶ್ ರಾಜ್ ಅವರು ಈಗ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮಾಡಿರುವ ನಟ ಪ್ರಕಾಶ್ ರಾಜ್, ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಯುವತಿಯೊಬ್ಬಳ ‘ಅಬ್ಕಿ ಬಾರ್ 400 ಪಾರ್’ ಘೋಷಣೆಯನ್ನು ಹಂಚಿಕೊಂಡು ಪ್ರಧಾನಿಯ ಕಾಲೆಳೆದಿದ್ದಾರೆ.
ಪ್ರಕಾಶ್ ರಾಜ್ ಸಾಮಾಜಿಕ ಜಾಲತಾಣದಲ್ಲಿ, ‘ಚಕ್ರವರ್ತಿ ನಗ್ನನಾಗಿದ್ದಾನೆ. ಈಗ ಬೇರೊಬ್ಬರ ಬೆಂಬಲದಲ್ಲಿ ನಡೆಯಲು ಒತ್ತಾಯಿಸುತ್ತಿದ್ದಾನೆ. ಅವರ ಅಂಹಕಾರವನ್ನು ಪಂಕ್ಚರ್ ಮಾಡಿದ್ದಕ್ಕಾಗಿ ಮತ್ತು ಅವರ ಸ್ಥಾನವನ್ನು ತೋರಿಸಿದ್ದಕ್ಕಾಗಿ ಭಾರತ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ನಾವು ನಮ್ಮ ಪರವಾಗಿ ಚೆನ್ನಾಗಿ ಹೋರಾಡಿದ್ದೇವೆ. ನಾವು ಮುಂದುವರೆಯುತ್ತೇವೆ’ ಎಂದು ಬರೆದುಕೊಂಡಿದ್ದಾರೆ. ಅಂದಹಾಗೆಯೇ ವಾರಣಾಸಿಯಲ್ಲಿ ಸ್ಪರ್ಧಿಸಿದ್ದ ಪ್ರಧಾನಿ ನರೇಂದ್ರ ಮೋದಿ 152513 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಮೋದಿಗೆ ಒಟ್ಟು 6,12,970 ಮತಗಳು ಬಿದ್ದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


