ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಜೂನ್ 9ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ದೇಶದ ರಾಜಕೀಯದಲ್ಲಿ ಕಿಂಗ್ ಮೇಕರ್ ಪಟ್ಟದಲ್ಲಿರುವ ಚಂದ್ರಬಾಬು ನಾಯ್ಡು ಇದೀಗ ಜೂನ್ 9 ರಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ(TDP) ಪಕ್ಷ 158 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಅಧಿಕಾರರೂಡ ಜಗನ್ ಮೋಹನ್ ರೆಡ್ಡಿ ವೈಎಸ್ಆರ್(YSR) ಕಾಂಗ್ರೆಸ್ ನೆಲಕಚ್ಚಿದೆ. NDA ಮೈತ್ರಿಕೂಟ ಪಕ್ಷವಾದ ಟಿಡಿಪಿ 133, ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ 21 ಹಾಗೂ ಬಿಜೆಪಿ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಳೆದ ಬಾರಿ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಿದ್ದ ಜಗನ್ ರೆಡ್ಡಿ ನೇತೃತ್ವದ YSRCP ಪಕ್ಷ ಕೇವಲ 15 ಸ್ಥಾನಗಳಿಗೆ ಕುಸಿದಿದೆ. ಒಟ್ಟು 178 ಸ್ಥಾನಗಳ ಪೈಕಿ ಅಭೂತಪೂರ್ವ ಗೆಲುವು ಕಂಡಿರುವ ಟಿಡಿಪಿ ಯಾವುದೇ ಅಡೆತಡೆ ಇಲ್ಲದೆ ಸರ್ಕಾರ ರಚಿಸಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


