ಪ್ರಾದೇಶಿಕ ವಲಯ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ಸಸ್ಯಕಾಶಿ ಶ್ರೀ ಕ್ಷೇತ್ರ ಸಿದ್ದರಬೆಟ್ಟ ಪುಣ್ಯಕ್ಷೇತ್ರದಲ್ಲಿ, ಗಿಡ ನೆಡುವ ಮುಖೇನ ಶ್ರೀ ಮಠದ ಶ್ರೀಗಳು ಹಸಿರು ಕ್ರಾಂತಿಗೆ ಚಾಲನೆ ನೀಡಿದರು.
ಅರಣ್ಯ ಇಲಾಖೆ ಅಧಿಕಾರಿ ರವಿಕುಮಾರ್ ಪ್ರತಿ ಹಳ್ಳಿ ಹಳ್ಳಿಯಲ್ಲೂ ಗಿಡಗಳ ನೆಡುವ ಮುಖೇನ ಹಸಿವು ಕ್ರಾಂತಿ ಕಾರ್ಯಕ್ರಮ ಮಾಡುವ ಆಶಯವನ್ನು ವ್ಯಕ್ತಪಡಿಸಿದರು.

ಕೊರಟಗೆರೆ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ, ಕೋರ್ಟ್ ಆವರಣದಲ್ಲಿ, ಸರ್ಕಾರಿ ಶಾಲೆಗಳ ಆವರಣದಲ್ಲಿ ಸೇರಿದಂತೆ ಸಿದ್ದರಬೆಟ್ಟದ ಸತ್ಯಕಾಶಿ ಕ್ಷೇತ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು ಎಂದು ತಾಶಿಲ್ದಾರ್ ಮಂಜುನಾಥ್ ತಿಳಿಸಿದರು.
ವರುಣನ ಕೃಪೆ, ವನ್ಯಜೀವಿಗಳ ಸಂರಕ್ಷಣೆ, ತಂಪಾದ ಗಾಳಿ, ಕುಡಿಯುವ ನೀರು, ಮನುಷ್ಯನಿಗೆ ಅತ್ಯವಶ್ಯಕ. ಇವೆಲ್ಲವೂ ಒಳಗೊಂಡಂತೆ ಸುಂದರ ಅರಣ್ಯ ಪ್ರದೇಶ ನಿರ್ಮಾಣಕ್ಕಾಗಿ ಈ ಹಸಿರು ಕ್ರಾಂತಿ ಮುಖ್ಯ.
ಸರ್ಕಾರದ ಚಿಂತನೆಯಂತೆ ಅರಣ್ಯ ಇಲಾಖೆ ವತಿಯಿಂದ, ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಪಾರ್ಕ್ ನಿರ್ಮಾಣಕ್ಕೆ ನಿರ್ಧರಿಸಿದೆ ಎಂದು ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ಶಿಲ್ಪಾ ತಿಳಿಸಿದರು.

ಸರ್ಕಾರಿ ಶಾಲೆ, ಅಂಗನವಾಡಿ, ಗ್ರಾಮದ ಪ್ರಮುಖ ರಸ್ತೆಗಳ ಬದಿಯಲ್ಲಿ, ಗಿಡಗಳನ್ನ ನೆಟ್ಟು ಸಂರಕ್ಷಿಸುವ ಕೆಲಸವನ್ನು ಆದಷ್ಟು ಬೇಗ ಶುರು ಮಾಡುತ್ತೇವೆ ಎಂದು ಅರಣ್ಯ ಇಲಾಖೆ ಅಧಿಕಾರಿ ರವಿಕುಮಾರ್ ತಿಳಿಸಿದರು.
ಇದೇ ಸಂದರ್ಭದಲ್ಲಿ ತಾಲೂಕ್ ಮಠದ ಎಲ್ಲಾ ಅಧಿಕಾರಿಗಳು, ಕಚೇರಿ ಸಿಬ್ಬಂದಿ ವರ್ಗದವರು, ವಲಯ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾಮಾಜಿಕ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕರು, ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಶ್ರೀಮಠದ ಭಕ್ತರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ ಎನ್ ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


