‘ಲಿವಿಂಗ್ ಟುಗೆದರ್’ ಎಂಬಂತೆ ಜೀವನ ನಡೆಸುತ್ತಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ಜೂ.೫ರಂದು ವರದಿಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಜೋಡಿ, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಪ್ರಭು(38), ಲಕ್ಕಮ್ಮ(30) ಮೃತರು ಎಂದು ಗುರುತಿಸಲಾಗಿದೆ. ಪ್ರಭು ಡ್ರೈವರ್ ಕೆಲಸ ಮಾಡುತ್ತಿದ್ದ ಮತ್ತು ಲಕ್ಕಮ್ಮ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕಳೆದ ಕೆಲ ವರ್ಷಗಳ ಹಿಂದೆ ಒಬ್ಬರಿಗೊಬ್ಬರು ಪರಿಚಿಯವಾಗಿತ್ತು. ಹೀಗಾಗಿ ಇಬ್ಬರು ಒಂದೇ ಮನೆಯಲ್ಲಿ ಸಹಜೀವನ ನಡೆಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಸ್ಥಳೀಯರು ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


