ಸರಗೂರು: ತಾಲ್ಲೂಕಿನ ಪಟ್ಟಣದ ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮಕ್ಕೆ, ಅರಣ್ಯಾಧಿಕಾರಿ ಹನುಮಂತರಾಜು ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
“ನಮ್ಮ ಪೃಥ್ವಿ ಜೀವಿಗಳನ್ನು ಹೊಂದಿರುವ ಏಕೈಕ ಗ್ರಹ. ಇದು ನಮ್ಮ ವಾಸಸ್ಥಾನ. ಭೂಮಿಯಲ್ಲಿನ ಜೀವಿಗಳ ಉಗಮ, ವಿಕಾಸ, ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವುದು ಪಂಚಭೂತಗಳಿಂದ ನಿರ್ಮಿತವಾದ ನಮ್ಮ ಪರಿಸರ. ಸಂಕ್ಷಿಪ್ತವಾಗಿ ಹೇಳುವುದಾದರೆ ನಮ್ಮ ಸುತ್ತಲಿನ ವಾತಾವರಣವೇ ಪರಿಸರ” ಎಂದು ಸರಗೂರು ವಲಯ ಅರಣ್ಯಾಧಿಕಾರಿ ಹನುಮಂತರಾಜು ತಿಳಿಸಿದರು.

“21ನೇ ಶತಮಾನದ ಸ್ಪರ್ಧಾತ್ಮಕ, ಯಾಂತ್ರಿಕ ಜೀವನದ ಜಂಜಾಟದಲ್ಲಿ ನಾವೆಲ್ಲರೂ ತಲ್ಲೀನರಾಗಿದ್ದೇವೆ. ಅಭಿವೃದ್ಧಿ, ಹಣದ ಬೆನ್ನತ್ತಿ ಓಡುವ ಈ ಓಟದಲ್ಲಿ, ಪ್ರಕೃತಿ, ಪರಿಸರದ ಕುರಿತಾದ ಆಸ್ಥೆ ಮರೆಯಾಗಿದೆ. ಆ ಕಾರಣದಿಂದ ದಿನೇ ದಿನೇ ಪ್ರಕೃತಿ ತನ್ನ ತನವನ್ನು ಕಳೆದುಕೊಳ್ಳುತ್ತಿದೆ. ತನ್ನ ಜೀವವೈವಿಧ್ಯತೆಯನ್ನು, ತನ್ನ ನೈಸರ್ಗಿಕ ಸೌಂದರ್ಯ, ತನ್ಮಯತೆಯನ್ನು ಕಳೆದುಕೊಳ್ಳುತ್ತಿದೆ” ಎಂದರು.
“ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಶಾಲಾ ಸಲಹೆಗಾರರು ಕೆಂಡಗಣ್ಣಸ್ವಾಮಿ ಮಾತನಾಡಿ, ನಮ್ಮ ಸುತ್ತಲಿನ ಸ್ವಚ್ಛತಾ ಸಮಸ್ಯೆಯೇ ಇರಲಿ ಅಥವಾ ಜಾಗತಿಕವಾಗಿ ತಾಪಮಾನ ಏರಿಕೆ, ಮಾಲಿನ್ಯದಂತ ಸಮಸ್ಯೆಗಳೇ ಇರಲಿ ಪರಿಸರ ಎದುರಿಸುತ್ತಿರುವ ಸಮಸ್ಯೆಗಳು, ಸವಾಲುಗಳು ಒಂದೆರಡಲ್ಲ. ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಭೂಮಿ ಮೇಲ್ಮೈ ಅಷ್ಟೇ ಅಲ್ಲದೆ ಸಮುದ್ರ ಜೀವಿಗಳೂ ತೊಂದರೆಗೆ ಸಿಲುಕಿರುವ ದುರಂತ ನಮ್ಮ ಕಣ್ಣ ಮುಂದಿದೆ. ಹವಾಮಾನ ಬದಲಾವಣೆ, ಪ್ರಾಕೃತಿಕ ವಿಕೋಪಗಳ ಇತ್ತೀಚೆಗೆ ಸರ್ವೇ ಸಾಮಾನ್ಯವಾಗಿಬಿಟ್ಟಿವೆ. ಆದ್ದರಿಂದ ಇಂಥ ವಿಷಮ ಸ್ಥಿತಿಯಲ್ಲಿ ಭವಿಷ್ಯಕ್ಕಾಗಿ, ಮುಂದಿನ ಪೀಳಿಗೆಗೆ ಭೂಮಿಯನ್ನು ಉಳಿಸುವ ನಿಟ್ಟಿನಲ್ಲಿ ಇಂದಿನ ಯುವ ಜನಾಂಗವಾದ ನಮ್ಮ ಕರ್ತವ್ಯ, ನಮ್ಮ ಪಾತ್ರ ಬಲು ದೊಡ್ಡದು” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯು ಮುಖ್ಯೋಪಾಧ್ಯಾಯ ಸತೀಶ್, ವಲಯ ಅರಣ್ಯಾಧಿಕಾರಿ ಹನುಮಂತರಾಜು, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಹಾಗೂ ಶಾಲಾ ಸಲಹೆಗಾರರು ಕೆಂಡಗಣ್ಣಸ್ವಾಮಿ, ಅರಣ್ಯ ಇಲಾಖೆ ಡಿ ಆರ್ ಎಫ್ ಅಭಿಲಾಷ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


