nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ: ಡಾ.ಶ್ರೀಧರ್
    ತಿಪಟೂರು December 26, 2021

    ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ: ಡಾ.ಶ್ರೀಧರ್

    By adminDecember 26, 2021No Comments2 Mins Read
    adi jambhava

    namma tumakuru

    ತಿಪಟೂರು: ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ ಎಂದು ಡಾ.ಶ್ರೀಧರ್ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.


    Provided by
    Provided by

    ನಗರದ ಶಿಕ್ಷಕರ ಭವನದಲ್ಲಿ ಶ್ರೀ ಆದಿಜಾಂಬವ ಪರಿಶಿಷ್ಟ ಜಾತಿ ವಿವಿಧೋದ್ದೇಶ ಸಹಕಾರಿ ಸಂಘ ಹಮ್ಮಿಕೊಂಡಿದ್ದ 7 ನೇ ವರ್ಷದ ಸರ್ವ ಸದಸ್ಯರುಗಳ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಸಿ ದೀಪಬೆಳಗುವ ಮೂಲಕ ಕಾರ್ಯಕ್ರಮವನ್ನ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೂಲ ಆಶಯದಂತೆ ಸಹಕಾರಿ ಕ್ಷೇತ್ರದಲ್ಲಿ “ಎಲ್ಲರಿಗಾಗಿ ಒಬ್ಬರು, ಒಬ್ಬರಿಗಾಗಿ ಎಲ್ಲರೂ” ಎಂಬ ಸಹಕಾರಿ ಮಂತ್ರದಂತೆ ನಾವು ನಡೆಯಬೇಕು. ನಿತ್ಯ ದುಡಿದು ಬದುಕುವ ವರ್ಗಕ್ಕೆ ನಮ್ಮದೆ  ಆದಂತಹ ಸಹಕಾರಿ ಬ್ಯಾಂಕ್ ಇದ್ದಾಗ ನಮಗೆ ಸಹಕಾರಿಯಾಗುತ್ತದೆ ಎಂದರು.

    ಈ ದೇಶಕ್ಕೆ ಒಂದು ಸಂವಿಧಾನವಿಲ್ಲದೆ ಇದ್ದಾಗ ಆಶಾಕಿರಣವಾಗಿ ಬಂದವರು ಡಾ.ಬಿ.ಆರ್. ಅಂಬೇಡ್ಕರ್, ಅವರು ತಳ ಸಮುದಾಯಗಳ ಅಭಿವೃದ್ದಿಗಾಗಿ ಅಂದೇ  ಸಂವಿಧಾನದಲ್ಲಿ ಮೀಸಲಾತಿಯನ್ನು ಅಳವಡಿಸಿದ್ದರು, ಅದನ್ನು ಪ್ರತಿಯೊಬ್ಬರು ಉಪಯೋಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಲಹೆ ನೀಡಿದರು.

    ಜನರು ಆರ್ಥಿಕವಾಗಿ ಸಬಲರಾಗದಿದ್ದರೆ ಮಾತ್ರ ಸಮಾಜ ಅವರನ್ನ ಬೇರೆಯದೆ ರೀತಿಯಾಗಿ ನೋಡುತ್ತದೆ. ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ ಎಂದರು. ಉದ್ಯಮಿಯಾಗಲು ಯಾವುದೇ ಶಿಕ್ಷಣ ಬೇಕಾಗಿಲ್ಲ, ವ್ಯವಹಾರ ಜ್ಞಾನ, ದೃಢ ಸಂಕಲ್ಪವೊಂದಿದ್ದರೆ ಸಾಕು ಯಾರು ಬೇಕಾದ್ರೂ ಉದ್ಯಮಿಯಾಗಬಹುದು ಎಂದರು.

    ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ ಮಹದೇವಯ್ಯ ಮಾತನಾಡಿ, ಸಹಕಾರ ಸಂಘದ ಬೆಳವಣಿಗೆಗೆ ಸದಸ್ಯರ ಹಾಗೂ ಶೇರುದಾರರ ಸಹಕಾರ ಅತಿ ಮುಖ್ಯವಾಗಿದೆ. ನಮ್ಮ ಸಂಘ ಸಮುದಾಯದ ಅಭಿವೃದ್ದಿ  ಉದ್ದೇಶದಿಂದ ಸ್ಥಾಪನೆಯಾಗಿದ್ದು, ಸಮಾಜದ ಬಂಧುಗಳು ಸಂಘದಲ್ಲಿ ಹೆಚ್ಚನ ಪ್ರಮಾಣದಲ್ಲಿ ಶೇರು ಹಾಗೂ ಠೇವಣಿ ಇಡಬೇಕು.  ಮೂಲಕ ತಾವು ಲಾಭಾಂಶ ಪಡೆಯುವ ಜೊತೆಗೆ ಸಂಘ ಹಾಗೂ ಸಮುದಾಯದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ತಿಳಿಸಿದರು

    ಬಳಿಕ ಎಸ್ ಎಸ್ ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರವನ್ನ‌ ನೀಡಿ ಗೌರವಿಸಿದರು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾದನೆ ಮಾಡಿರುವ ಸಮಾಜದ ಹಲವರಿಗೆ ಸನ್ಮಾನಿಸಲಾಯಿತು.

    ಕಾರ್ಯಕ್ರಮದ ಆರಂಭದಲ್ಲಿ ಕೋವಿಡ್ ಹಾಗೂ ಇತರೆ ಕಾರಣಗಳಿಂದ ಅಕಾಲಿಕವಾಗಿ ನಿಧನರಾದ ಆದಿಜಾಂಬವ ಸಮಾಜದ ಮುಖಂಡರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

    ಕಾರ್ಯಕ್ರಮದಲ್ಲಿ ನರಸಿಂಹಮೂರ್ತಿ ಕೆಇಬಿ, ಮಹಾದೇವಯ್ಯ, ಕೆ.ರಾಮಯ್ಯ, ಪಟ್ಟಾಭಿರಾಮು, ಮೈಲಾರಪ್ಪ, ರಾಜಶೇಖರ್, ಸಂತೋಷ್, ಪತ್ರಕರ್ತ ಕೃಷ್ಣ ಹಾಗೂ ಹರ್ಷ, ರೋಹಿತ್ ಸೇರಿದಂತೆ ಹಲವರು ಭಾಗವಹಿಸಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.