ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರು ಜಯಗಳಿಸಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಖಚಿತವಾಗಿದೆ.
ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಶಿಗ್ಗಾಂವಿ ಶಾಸಕರಾದ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಸಂಡೂರು ಶಾಸಕ ತುಕಾರಾಂ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ. ವಿಧಾನಪರಿಷತ್ ದಕ್ಷಿಣ ಕನ್ನಡ -ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪ್ರತಿನಿಧಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದು, ಈ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವುದು ಖಚಿತವಾಗಿದೆ.
ಹಾಲಿ ವಿಧಾನಸಭೆಯ ಈ ಮೂವರು ಸದಸ್ಯರು ಮತ್ತು ವಿಧಾನ ಪರಿಷತ್ತಿನ ಈ ಒಬ್ಬ ಸದಸ್ಯ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ಇವರಿಂದ ತೆರವಾಗಲಿರುವ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


