ಬೆಂಗಳೂರು: ಜೂನ್. 8 ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.
ಜೂ.8 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ. 3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.8 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


