ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್. ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್ ನಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ಎಸ್.ಐ.ಟಿ ಹಲವು ಬಾರಿ ನೋಟಿಸ್ ಕೊಟ್ಟಿತ್ತು. ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದ ಭವಾನಿ ರೇವಣ್ಣ ಅಧಿಕಾರಿಗಳು ಮನೆಗೇ ಬಂದು ವಿಚಾರಣೆ ನಡೆಸುವಂತೆ ತಿಳಿಸಿದ್ದರು ಎನ್ನಲಾಗಿದೆ.
ಮನೆಗೆ ತೆರಳಿದಾಗ ವಿಚಾರಣೆಗೆ ಸಹಕರಿಸದ ಕಾರಣ ಎಸ್.ಐ.ಟಿ ಕೋರ್ಟ್ ಮೊರೆ ಹೋಗಿತ್ತು ಎನ್ನಲಾಗಿದೆ. ಈಗ ಕೋರ್ಟ್ ಬಂಧನ ವಾರಂಟ್ ಜಾರಿ ಮಾಡಿದ್ದು, ಇತ್ತೀಚೆಗೆ ಭವಾನಿ ರೇವಣ್ಣರನ್ನು ವಶಕ್ಕೆ ಪಡೆಯಲು ಹೊಳೆನರಸೀಪುರ ನಿವಾಸಕ್ಕೆ ತೆರಳಿದ್ದ ಎಸ್‌ಐಟಿ ಅಧಿಕಾರಿಗಳು ಸತತ 7 ಗಂಟೆ ಕಾದು ವಾಪಸ್ ಆದ ಘಟನೆ ನಡೆದಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


