ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ವಕೀಲ ಜಿ. ದೇವರಾಜೇಗೌಡ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ತಮಗೆ ವಿಡಿಯೋ ಕಾಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರು ಆರೋಪಿ ಜಿ. ದೇವರಾಜೇಗೌಡರನ್ನು ಬಂಧಿಸಿದ್ದರು.
ಪ್ರಕರಣದಲ್ಲಿ ಹಾಸನದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿತ್ತು. ಹೀಗಾಗಿ ದೇವರಾಜೇಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಹೊಳೆನರಸೀಪುರದ ಟೌನ್ ಠಾಣೆಯ ಇನ್ಸ್ ಪೆಕ್ಟರ್ ಮತ್ತು ಸಂತ್ರಸ್ತ ಮಹಿಳೆಯನ್ನು ಪ್ರತಿವಾದಿ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


