ಕೊಪ್ಪಳ: ಮದುವೆಯಾಗುವುದಾಗಿ ನಂಬಿಸಿ ಪ್ರಿಯತಮೆ ಮೇಲೆ ಅತ್ಯಾಚಾರವೆಸಗಿ ಪ್ರಿಯಕರ ಪರಾರಿಯಾದ ಘಟನೆ ನಡೆದಿದೆ. ಗಂಗಾವತಿ ತಾಲೂಕು ನಿವಾಸಿ ರವಿರಾಜ್ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ.
ಆರೋಪಿ ರವಿರಾಜ್ ನನ್ನು ಬಂಧಿಸಿ, ನನ್ನ ಜೊತೆ ಮದುವೆ ಮಾಡಿಸಿ ಎಂದು ಸಂತ್ರಸ್ತೆ ಪೊಲೀಸ್ ಠಾಣೆ ಎದುರು ಧರಣಿ ಕುಳಿತಿದ್ದಾಳೆ. 2020ರಲ್ಲಿ ಸಂತ್ರಸ್ತೆ ದ್ವೀತಿಯ ಪಿಯುಸಿ ಓದುವಾಗ ರವಿರಾಜ್ ಪರಿಚಯವಾಗಿದ್ದು, ಪರಿಚಯ ಸ್ನೇಹವಾಗಿ, ಸ್ನೇಹ ಪ್ರೀತಿಗೆ ತಿರುಗಿದೆ. ಇಬ್ಬರೂ 2021ರಿಂದ ಪರಸ್ಪರ ಪ್ರೀತಿಸಲು ಆರಂಭಿಸಿದ್ದಾರೆ.
ಪ್ರಕರಣ ಸಂಬಂಧ ಸಂತ್ರಸ್ತೆ ಮಾತನಾಡಿ “ನಾವಿಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದೆವು. ನಮ್ಮ ಮನೆಗೆ ಬಂದು ಮದುವೆ ಆಗುತ್ತೇನೆ ಅಂತ ನಮ್ಮ ಹೆತ್ತವರಿಗೆ ಹೇಳಿ ಒಪ್ಪಿಸಿದ್ದನು. ಇಬ್ಬರ ಮದುವೆ ಕೂಡ ನಿಶ್ಚಯವಾಗಿತ್ತು. ಒಂದು ದಿನ ಮನೆಗೆ ಬಂದು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮದುವೆ ಆಗುತ್ತೇನೆ ಅಂತ ನಂಬಿಸಿ ಸತತ ಎರಡು ವರ್ಷದಿಂದ ನನ್ನ ಅತ್ಯಾಚಾರವೆಸಗಿದ್ದಾನೆ. ಈ ಸಮಯದಲ್ಲಿ ವಿಡಿಯೋ ಮಾಡಿಕೊಂಡಿದ್ದಾನೆ. ನನ್ನ ವಿಡಿಯೋ ಇಟ್ಕೊಂಡು ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಕೊಪ್ಪಳ ನಗರದಲ್ಲಿ ಅವರ ಸಂಬಂಧಿಯ ಪೊಲೀಸ್ ಕ್ವಾಟರ್ಸ್ನಲ್ಲಿ ಕೂಡಾ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ನಂತರ 3-4 ಸಲ ಗರ್ಭಪಾತ ಮಾಡಿಸಿದ್ದಾನೆ. ಇದೀಗ ದೂರು ದಾಖಲಿಸಿದರೂ ಆತನನ್ನು ಬಂಧಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ” ಎಂದು ಸಂತ್ರಸ್ತೆ ಆರೋಪ ಮಾಡಿದ್ದಾರೆ.
ಇದೀಗ, ಆರೋಪಿ ರವಿರಾಜ್ ನನ್ನು ಬಂಧಿಸಿ, ನನ್ನ ಜೊತೆ ಮದುವೆ ಮಾಡಿಸಿ ಎಂದು ಸಂತ್ರಸ್ತೆ ಮತ್ತು ಆಕೆಯ ಪೋಷಕರು ಪೊಲೀಸ್ ಠಾಣೆ ಎದುರು ಧರಣಿ ಕೂತಿದ್ದಾರೆ. ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


