ಭಾರತೀಯ ಸೇನೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸ್ಪೋರ್ಟ್ಸ್ಪರ್ಸನ್ (ಹವಿಲ್ದಾರ್ & ನಾಯ್ಬ್ ಸುಬೇದಾರ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು. ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 17.5 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ
ಫಿಜಿಕಲ್ ಫಿಟ್ನೆಸ್ ಟೆಸ್ಟ್,ಫಿಜಿಕಲ್ ಸ್ಟಾಂಡರ್ಡ್ಸ್ ಟೆಸ್ಟ್ & ಸ್ಕಿಲ್ ಟೆಸ್ಟ್, ಮೆಡಿಕಲ್ ಟೆಸ್ಟ್ ಇರುತ್ತದೆ.
ಸೆಪ್ಟೆಂಬರ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ
ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಅರ್ಜಿ ಕಳುಹಿಸುವ ವಿಳಾಸವನ್ನು ಈ ಕೆಳಗೆ ನೀಡಲಾಗಿದೆ.
‘ಡೈರೆಕ್ಟರೇಟ್ ಆಫ್ ಪಿಟಿ ಮತ್ತು ಸ್ಪೋರ್ಟ್ಸ್
ಜನರಲ್ ಸ್ಟಾಫ್ ಬ್ರಾಂಚ್
IHQ ಆಫ್ MoD (ಆರ್ಮಿ)
ಕೊಠಡಿ ಸಂಖ್ಯೆ 747 ‘A’ ವಿಂಗ್
ಸೇನಾ ಭವನ
PO ನವದೆಹಲಿ-110011
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


