ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಳಲು ಕೋರ್ಟ್ ಮೆಟ್ಟಿಲೇರಿದ್ದಾರೆ.
ಶಾಂತಿನಗರ ಕೋರ್ಟ್ ನಲ್ಲಿ ನಿನ್ನೆ ಕೇಸ್ ದಾಖಲಿಸಿದ್ದಾರೆ. ಪ್ರಕರಣದ ಮೊದಲ ವಿಚಾರಣೆ ಹಿನ್ನೆಲೆಯಲ್ಲಿ ಇಬ್ಬರೂ ಇಂದು 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದರು ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆ ಬಗ್ಗೆ ಚಂದನ್ ಮತ್ತು ನಿವೇದಿತಾ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ವೃತ್ತಿಜೀವನದ ಒಳಿತಿನ ದೃಷ್ಟಿಯಿಂದ ಅವರು ಡಿವೋರ್ಸ್ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅವರಿಬ್ಬರ ನಡುವಿನ ದಾಂಪತ್ಯ ಜೀವನ ಬಿರುಕುಗೊಳ್ಳಲು ಕಾರಣವೇನೆಂಬುದು ತಿಳಿದುಬಂದಿಲ್ಲ.
ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಪರಿಚಿತಗೊಂಡು, ಆನಂತರ ಹೊರಗೆ ಬಂದಮೇಲೆ ಪ್ರೀತಿಯಲ್ಲಿದ್ದರು. ಬಳಿಕ ಹಿರಿಯರ ಒಪ್ಪಿಗೆ ಮೇರೆಗೆ 2020ರ ಫೆಬ್ರವರಿಯಲ್ಲಿ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದರು. ಕಳೆದ ಒಂದು ವಾರದ ಹಿಂದಷ್ಟೇ ಈ ಜೋಡಿ ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ‘ಕೋಟಿ’ ಸಿನಿಮಾದ ಇವೆಂಟ್‌ಗೆ ಈ ಜೋಡಿ ಹಾಜರಾಗಿತ್ತು. ಕ್ಯಾಮೆರಾ ಮುಂದೆ ಇಬ್ಬರು ಒಟ್ಟಿಗೆ ಮಾತನಾಡಿದ್ದರು. ಈಗ ನೋಡಿದರೆ ಡಿವೋರ್ಸ್ ಬಗ್ಗೆ ಮಾಹಿತಿ ಸಿಕ್ಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


