ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯು ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದ್ದು, ಶೀಘ್ರವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಶೇ.10ರಿಂದ 15 ರಷ್ಟು ಹೆಚ್ಚಳ ಮಾಡಲು ಚಿಂತನೆ ಮಾಡಲಾಗಿದೆ.
ಸಾರಿಗೆ ಬಸ್ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಚರ್ಚೆಗಳು ಶುರುವಾಗಿದ್ದು, ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ವರ್ಷದಿಂದ ವರ್ಷಕ್ಕೆ ಡೀಸೆಲ್, ಬಿಡಿ ಭಾಗಗಳ ದರ ಹೆಚ್ಚಳ, ಸಿಬ್ಬಂದಿ ವೇತನ ಹೆಚ್ಚಳ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಖರ್ಚು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಾರಿಗೆ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವ ಸಾಧ್ಯತೆ ಇದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


