ನವದೆಹಲಿ: ಇಂಡಿಯಾ ಮೈತ್ರಿ ಮುಂದುವರಿಯಬೇಕು ಮತ್ತು ಗುಂಪು “ಸಂಸತ್ತಿನಲ್ಲಿ ಮತ್ತು ಹೊರಗೆ ಒಗ್ಗಟ್ಟಿನಿಂದ ಮತ್ತು ಸಾಮೂಹಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
ನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಯಲ್ಲಿ ಮಾತನಾಡಿದ ಅವರು, ಜನರು ಆಡಳಿತ ಪಕ್ಷದ ಸರ್ವಾಧಿಕಾರಿ ಮತ್ತು ಪ್ರಜಾಪ್ರಭುತ್ವ ವಿರೋಧಿಗಳ ವಿರುದ್ಧ ಮತ ಚಲಾಯಿಸಿದ್ದಾರೆ ಎಂದರು.
ವಿಭಜನೆ, ದ್ವೇಷ ಮತ್ತು ಧ್ರುವೀಕರಣದ ರಾಜಕೀಯವನ್ನು ಮತದಾರರು ತಿರಸ್ಕರಿಸಿದ್ದಾರೆ ಎಂದು ಒತ್ತಿ ಹೇಳಿದ ಖರ್ಗೆ, ಜನರು ನಮ್ಮ ಮೇಲೆ ಗಣನೀಯ ಪ್ರಮಾಣದಲ್ಲಿ ನಂಬಿಕೆ ಇಟ್ಟಿದ್ದಾರೆ ಮತ್ತು ನಾವು ಅದನ್ನು ಉಳಿಸಿಕೊಳ್ಳಬೇಕು ಎಂದರು.
ಲೋಕಸಭೆಗೆ ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಸದಸ್ಯರನ್ನು “ಪ್ರತಿಕೂಲ ಪರಿಸ್ಥಿತಿಗಳಲ್ಲಿ ಹೋರಾಡಿ ಚುನಾವಣೆಯಲ್ಲಿ ಗೆದ್ದವರು” ಎಂದು ಬಣ್ಣಿಸಿ ಅಭಿನಂದಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


