ಸಿದ್ದಾಪುರ: ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲದಲ್ಲಿ ನಡೆದಿದೆ.
ಆಟೋ ಚಾಲಕ ವಿಜಯ್ ಎಂಬುವರು ಎಂದಿನಂತೆ ಮನೆ ಬಳಿ ಆಟೋ ರಿಕ್ಷಾ ನಿಲ್ಲಿಸಿ ಹೊರಗೆ ತೆರಳಿದ್ದರು. ರಾತ್ರಿಯ ವೇಳೆ ನಾಯಿಯನ್ನು ಅಟ್ಟಿಸಿಕೊಂಡು ಬಂದ ಕಾಡಾನೆ ಮನೆ ಸಮೀಪದಲ್ಲಿದ್ದ ರಿಕ್ಷಾ ಮೇಲೆ ದಾಳಿ ನಡೆಸಿದೆ.
ಕಾಡಾನೆಯ ದಾಳಿಯ ಪರಿಣಾಮ ಆಟೋದ ಹಿಂಭಾಗಕ್ಕೆ ಹಾನಿಯಾಗಿದೆ. ಕಾಡಾನೆಗಳು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಅರಣ್ಯ ಇಲಾಖೆ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕು ಎಂದು ಇಲ್ಲಿನ ಸ್ಥಳೀಯರು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


