ತುಮಕೂರು: ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಅನೇಕ ಕೆರೆಕಟ್ಟೆಗಳು ಕೋಡಿಬಿದ್ದು ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ.
ಕೊರಟಗೆರೆ ತಾಲೂಕು ವ್ಯಾಪ್ತಿಯ ಅತಿ ದೊಡ್ಡ ಕೆರೆಗಳಲ್ಲಿ ಒಂದು ಆಗಿರುವ, ಜಂಪೇನ ಹಳ್ಳಿ ಕೆರೆಗೆ ಭಾರೀ ಪ್ರಮಾಣದ ಮಳೆ ನೀರು ಹರಿದು ಬರುತ್ತಿದ್ದು, ಕೆರೆ ಕೋಡಿ ಬಿದ್ದ ಪರಿಣಾಮ ಸುತ್ತಮುತ್ತಲ ಜಮೀನುಗಳಲ್ಲಿ ನೀರು ಆವರಿಸಿಕೊಂಡಿದೆ.
ಇನ್ನೊಂದೆಡೆ ಕಳೆದ ಮೂರು ದಿನಗಳಿಂದ ಸಂಜೆ ವೇಳೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


