ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದ್ದು, ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ಟಿಫ್ಟ್ ಕಾರೊಂದು ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಬಂದಾಗ ಬೆಂಕಿ ಕಾಣಿಸಿಕೊಂಡಿದೆ.
ಕೂಡಲೇ ಕಾರಿನಲ್ಲಿದ್ದ ನಾಲ್ವರು ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸ್ವಿಫ್ಟ್ ಕಾರು ಸುಟ್ಟು ಹೋಗಿದೆ. ಕಡೂರು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


