ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಂಚಾಲೆ ಗ್ರಾಮದ ಬಳಿ ಮಾರುತಿ ಓಮ್ನಿ ಹಾಗೂ ಇಂಡಿಕಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಜೇಯ(21) ಮೃತ ದುರ್ದೈವಿಯಾಗಿದ್ದಾರೆ.
ಓಮ್ನಿ ಕಾರು ಜೋಗದಿಂದ ಶಿವಮೊಗ್ಗ ಕಡೆ ಹೊರಟಿತ್ತು. ಇಂಡಿಕಾ ಕಾರು ಆನಂದಪುರದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಂಡಿಕಾ ಕಾರು ಚಾಲಕ ಹಾಗೂ ಮಾರುತಿ ಓಮ್ನಿಯಲ್ಲಿದ್ದ ಯುವಕನಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


