ಬೆಂಗಳೂರು: ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಮೇಲೆ ವೇಗವಾಗಿ ಬಂದಂತಹ ಕಾರು ಡಿವೈಡರ್ ಗೆ ಗುದ್ದಿ ಪಕ್ಕದಲ್ಲಿರುವ ಕೆರೆಗೆ ಬಿದ್ದಿದೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ.
ತಕ್ಷಣ ಗಾಯಾಳುಗಳನ್ನುಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವ ವೇಳೆ ವೇಗವಾಗಿ ಬಂದಂತಹ ಕಾರು ನಿಯಂತ್ರಣ ಕಳೆದುಕೊಂಡು ಕೆರೆಗೆ ಬಿದ್ದಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


