ತುಮಕೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಬಗ್ಗೆ ಸಚಿವ ರಾಜಣ್ಣ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ.
ನಾನು ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ನನಗೆ ಹಾಸನದ ಚುನಾವಣೆ ಜವಾಬ್ದಾರಿ ಕೊಟ್ಟಿದ್ರು. ತುಮಕೂರಿಗೆ ನಾನು, ಪರಮೇಶ್ವರ್ ಮಂತ್ರಿಗಳಾಗಿದ್ದೇವೆ. ಆದರೆ ನಾನು ಹಾಸನ ಜಿಲ್ಲೆಯ ಚುನಾವಣೆ ಬಗ್ಗೆ ಹೆಚ್ಚು ಒತ್ತು ಕೊಟ್ಟೆ. ತುಮಕೂರು ಚುನಾವಣೆ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗಲಿಲ್ಲ. ನನ್ನದೊಂದು ಮಧುಗಿರಿ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದೆ. ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸದಿದ್ದರೆ ಹಾಸನಕ್ಕೆ ಬರಲ್ಲ ಅಂತ ಹೇಳಿದ್ದೆ, ಈಗ ಗೆಲ್ಲಿಸಿದ್ದಾರೆ ಎಂದರು.
ಜಿಲ್ಲೆಯಲ್ಲಿ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ, ಎಲ್ಲಾ ಪಕ್ಷ, ಜಾತಿಯವರು ಮತ ಹಾಕಿದ್ದಾರೆ. ಪುಟ್ಟಸ್ವಾಮಿಗೌಡರ ಹೆಸರಿನ ಆಧಾರದ ಮೇಲೆ ಹೆಚ್ಚಿನ ಬಹುಮತ ಬರಲು ಸಾಧ್ಯವಾಗಿದೆ. ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ ಎಂದು ಅವರಿಗೆ ಅಭಿನಂದನೆ ಸಲ್ಲಿಸಬೇಕು. ನಾನೇ ಗೆಲ್ಲಿಸಿದ್ದೀನಿ ಅಂತಾ ಹೇಳಿದ್ರೆ, ಅದು ದುರಂಹಕಾರದ ಮಾತಾಗುತ್ತೆ ಎಂದರು.
ಕಳೆದ ಚುನಾವಣೆಯಲ್ಲಿ ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನು ಇಲ್ಲ. ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಎರಡು ಸಾವಿರ ಓಟು ಇರಲಿಲ್ಲ, ನಾನು ಅವರಿಗೆ ಎಂಭತ್ತು ಸಾವಿರ ಓಟು ಕೊಡಿಸಿದ್ದೆ. ಅದಕ್ಕೆ ಅವರು ಸೋತರು. ದೇವೇಗೌಡರು ಸೋಲಲು ನಾನೇ ಕಾರಣ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296