ಲಕ್ನೋ: ಮುಸ್ಲಿಮರ ವಿರುದ್ಧ ಪ್ರಚೋದಿಸುವ ಉದ್ದೇಶದಿಂದ ಮುಸ್ಲಿಮರ ವೇಷ ಹಾಕಿ ಅಯೋಧ್ಯೆಯ ಹಿಂದೂಗಳನ್ನು ಟೀಕಿಸಿದ ಧೀರೇಂದ್ರ ರಾಘವ್ ಎಂಬಾತನನ್ನು ಬಂಧಿಸಲಾಗಿದೆ.
ಸ್ಕಲ್ ಕ್ಯಾಪ್ ಧರಿಸಿದ ವ್ಯಕ್ತಿಯೊಬ್ಬ “ದೋಗ್ಲೆ” (ಎರಡು ಮುಖದವರು) ಹಿಂದೂಗಳನ್ನು ಉದ್ದೇಶಿಸಿ ಮಾತನಾಡುವ ವಿಡಿಯೊ ವೈರಲ್ ಆಗಿತ್ತು. ಮುಸ್ಲಿಂ ವ್ಯಕ್ತಿ ಎಂದು ಹೇಳಿಕೊಂಡ ಆತ, ಅಯೋಧ್ಯೆಯ ಹಿಂದೂಗಳನ್ನು ಎರಡು ಮುಖದವರು ಎಂದು ಕರೆದಿದ್ದು, ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದಿದ್ದರೆ, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿದ್ದರು ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
“ಒಬ್ಬ ನಾಯಕ ನಮಗೆ ಮಸೀದಿ ನಿರ್ಮಿಸಿದರೆ, ನಾವು ನಮ್ಮ ಜೀವನವಿಡೀ ಆತನಿಗೆ ಮತ ಹಾಕುತ್ತೇವೆ. ಆದರೆ ನಿಮಗೆ ಎಲ್ಲವನ್ನೂ ಮಾಡಿದ್ದರೂ ನೀವು ಮೋದಿಗೆ ಮತ ಹಾಕುವುದಿಲ್ಲ” ಎಂದು ಆತ ಹೇಳಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


