ಬೆಂಗಳೂರು: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯುವ ಉದ್ದೇಶದಿಂದ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‍ಗಳು ತಮ್ಮ ಕೆಪಿಎಂಇ(ಕರ್ನಾಟಕ ಪ್ರೈವೆಟ್ ಮೆಡಿಕಲ್ ಎಸ್ಟಾಬ್ಲಿಷ್ ಮೆಂಟ್ ಅಸೋಸಿಯೇಷನ್)ನ ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸಬೇಕು ಎಂದು ಆರೋಗ್ಯ ಇಲಾಖೆಯು ಆದೇಶ ಹೊರಡಿಸಿದೆ.
ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ ಕೆಪಿಎಂಇ ತಿದ್ದುಪಡಿ ಕಾಯಿದೆ 2017ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ.
ಆದೇಶದ ಪ್ರತಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು, ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


