ಚಾಮರಾಜನಗರ: ಕಾವೇರಿ ನದಿಯಲ್ಲಿ ಬಹಿರ್ದೆಸೆಗೆ ತೆರಳಿದ್ದವನ ಮೇಲೆ ಮೊಸಳೆ ದಾಳಿ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ. ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೊಳ್ಳೇಗಾಲ ತಾಲೂಕಿನ ಯಡಕುರಿಯಾ ಗ್ರಾಮದ ಕಾವೇರಿ ನದಿಯಲ್ಲಿ ಯುವಕ ಬಹಿರ್ದೆಸೆಗೆ ತೆರಳಿದ್ದ. ಇದೇ ವೇಳೆ ಆತನ ಮೇಲೆ ಮೊಸಳೆ ದಾಳಿ ಮಾಡಿದೆ.
ಸತ್ತೇಗಾಲ ಗ್ರಾಮದ ನಿವಾಸಿ ನಂಜುಂಡಸ್ವಾಮಿ (37) ಗಾಯಗೊಂಡ ವ್ಯಕ್ತಿ ಎನ್ನಲಾಗಿದೆ. ಕಾವೇರಿ ನದಿಯ ಬಳಿ ಬಹಿರ್ದೆಸೆಗೆ ತೆರಳಿದ್ದಾಗ ಘಟನೆ ಜರುಗಿದೆ. ಮೊಸಳೆ ದಾಳಿಯಿಂದ ಮುಖ ಹಾಗೂ ಕೈಗೆ ಗಾಯವಾಗಿದೆ. ಮೊಸಳೆಯಿಂದ ತಪ್ಪಿಸಿಕೊಂಡು ನದಿಯ ದಡದ ಮೇಲೆ ಬಂದು ವ್ಯಕ್ತಿ ಪ್ರಜ್ಞೆ ತಪ್ಪಿದ್ದಾನೆ. ಸಾರ್ವಜನಿಕರಿಂದ ಯುವಕನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


